ಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ 600 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ

Prasthutha|

ಬೆಂಗಳೂರು: ಭೂ ವಿಜ್ಞಾನಿ ಕೆ.ಎಸ್.ಪ್ರತಿಮಾ (43) ಅವರ ಕೊಲೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು, ಆರೋಪಿ ಕಿರಣ್ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

- Advertisement -

ನಗರದ 2ನೇ ಎಸಿಎಂಎಂ ನ್ಯಾಯಾಲಯಕ್ಕೆ 600 ಪುಟಗಳ ದೋಷಾರೋಪಪಟ್ಟಿ ಸಲ್ಲಿಸಲಾಗಿದೆ.

ಆರೋಪಿ ಕಿರಣ್ ನೀಡಿದ್ದ ಸ್ವಇಚ್ಛಾ ಹೇಳಿಕೆ, 70 ಮಂದಿ ಸಾಕ್ಷಿದಾರರ ಹೇಳಿಕೆ, ಸಿ.ಸಿ.ಟಿ.ವಿ. ಕ್ಯಾಮೆರಾದ ದೃಶ್ಯಾವಳಿ, ಸಾಂದರ್ಭಿಕ ಸಾಕ್ಷ್ಯ, ಡಿಜಿಟಲ್ ಸಾಕ್ಷ್ಯಾಧಾರ ಸಹಿತ ದೋಷಾರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

- Advertisement -

ದೊಡ್ಡಕಲ್ಲಸಂದ್ರದ ಕುವೆಂಪು ನಗರದ ಪ್ರತಿಮಾ ಅವರ ನಿವಾಸಕ್ಕೆ ನ.4ರಂದು ರಾತ್ರಿ ನುಗ್ಗಿದ್ದ ಆರೋಪಿ, ಕೊಲೆ ಮಾಡಿ ಪರಾರಿಯಾಗಿದ್ದ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Join Whatsapp