ಬೆಂಗಳೂರು: ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ

Prasthutha|

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾಗಿರುವ  61ನೇ ರಾಷ್ಟ್ರೀಯ ಓಪನ್ ಅಥ್ಲೆಟಿಕ್ಸ್ ಚಾಂಪಿಯನ್​ಶಿಪ್​ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆಯ (ಕೆಎಎ) ಆಶ್ರಯದಲ್ಲಿ ಅಕ್ಟೋಬರ್‌ 19ರವರೆಗೆ ಚಾಂಪಿಯನ್‌ಷಿಪ್‌ ನಡೆಯಲಿದ್ದು, 31 ತಂಡಗಳ ಒಟ್ಟು 868 ಅಥ್ಲೀಟ್‌ಗಳು ಕೂಟದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

- Advertisement -

ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಅಮೃತ ಮಹೋತ್ಸವ ಕ್ರೀಡಾ ಯೋಜನೆಯಡಿ 75 ಕ್ರೀಡಾಪಟುಗಳಿಗೆ ತರಬೇತಿ ನೀಡಿ, ಮುಂದಿನ ಒಲಂಪಿಕ್ಸ್ ನಲ್ಲಿ ಭಾಗವಹಿಸಲು  ಹಾಗೂ ದೇಶಕ್ಕಾಗಿ ಪದಕ ಗೆಲ್ಲಿಸುವ ಗುರಿಯನ್ನು ಹೊಂದಲಾಗಿದೆ ಎಂದು ತಿಳಿಸಿದರು.

ಗ್ರಾಮೀಣ ಕ್ರೀಡಾಪಟುಗಳಿಗೆ ಪ್ರೋತ್ಸಾಹ:

- Advertisement -

ಕರ್ನಾಟಕ ರಾಜ್ಯದಲ್ಲಿ ಕ್ರೀಡಾಕ್ಷೇತ್ರಕ್ಕೆ ಪ್ರಾಮುಖ್ಯತೆ ನೀಡಲಾಗುತ್ತಿದೆ. ಈ ವರ್ಷ ಗ್ರಾಮೀಣ ಕ್ರೀಡಾಕೂಟವನ್ನು ಪ್ರಾರಂಭಿಸಲಾಗಿದೆ. ಕಬ್ಬಡಿ, ಕೊಕೊ, ವಾಲಿಬಾಲ್, ಕುಸ್ತಿ, ಚಕ್ಕಡಿ ಓಡಿಸುವುದು ಮತ್ತು ಕರಾವಳಿಯ ಕಂಬಳ ಸೇರಿದಂತೆ ಗ್ರಾಮೀಣ ಕ್ರೀಡೆಗಳನ್ನು ಗ್ರಾಮ, ತಾಲ್ಲೂಕು, ಜಿಲ್ಲೆ ಹಾಗೂ ಅಂತಿಮವಾಗಿ ರಾಜ್ಯಮಟ್ಟದಲ್ಲಿ ಏರ್ಪಡಿಸಲಾಗುವುದು. ಗ್ರಾಮೀಣ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಗ್ರಾಮೀಣ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ. ಭಾರತ ರಾಷ್ಟ್ರವನ್ನು ಪ್ರತಿನಿಧಿಸುವ ಕ್ರೀಡಾಪಟುವಿಗೆ  ಇಡೀ ದೇಶ ಜನ ಒಗ್ಗಟ್ಟಾಗಿ ಅವರನ್ನು ಹುರಿದುಂಬಿಸುತ್ತಾರೆ, ಹೀಗೆ ಕ್ರೀಡೆಯ ಮೂಲಕ ಇಡೀ ಭಾರತವನ್ನು ಜೋಡಿಸಬಹುದಾಗಿದೆ ಎಂದು ತಿಳಿಸಿದರು.



Join Whatsapp