Home ಟಾಪ್ ಸುದ್ದಿಗಳು ಕೇಂದ್ರದ ಮಾರ್ಗಸೂಚಿಯಂತೆ ಬರ ಪಟ್ಟಿಗೆ ಕರ್ನಾಟಕದ 62 ತಾಲೂಕುಗಳು ಸೇರ್ಪಡೆ: ಕೃಷ್ಣಭೈರೇಗೌಡ

ಕೇಂದ್ರದ ಮಾರ್ಗಸೂಚಿಯಂತೆ ಬರ ಪಟ್ಟಿಗೆ ಕರ್ನಾಟಕದ 62 ತಾಲೂಕುಗಳು ಸೇರ್ಪಡೆ: ಕೃಷ್ಣಭೈರೇಗೌಡ

ಚಿತ್ರದುರ್ಗ: ಆಗಸ್ಟ್ 18ಕ್ಕೆ ಮಳೆ ಕೊರೆತೆ ಇರುವ ತಾಲೂಕುಗಳಲ್ಲಿ ಬೆಳೆ ಸಮೀಕ್ಷೆ ನಡೆಸಿದ್ದೇವೆ. ಒಂದು ಸುತ್ತಿನ ಬೆಳೆ ಸಮೀಕ್ಷೆ ಪ್ರಕಾರ 62 ತಾಲೂಕು ಬರ ಪಟ್ಟಿಗೆ ಸೇರಿದೆ. ಕೇಂದ್ರ ಸರ್ಕಾರದ ಮಾರ್ಗ ಸೂಚಿಯಂತೆ ಬರ ಪಟ್ಟಿಗೆ ಆಯ್ಕೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದರು.

ಇನ್ನೊಂದು ಸುತ್ತು ಬೆಳೆ ಸಮೀಕ್ಷೆ ಮಾಡಬೇಕು ಎಂದಾಗ ಉಳಿದ 51 ತಾಲೂಕು ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ. ಸೆಪ್ಟೆಂಬರ್ 2ಕ್ಕೆ 83 ತಾಲ್ಲೂಕು ಬರ ಪಟ್ಟಿಗೆ ಸೇರಿಸಲು ಸೂಚನೆ ನೀಡಿದ್ದೇವೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಸಮೀಕ್ಷೆ ವರದಿ ಬರುತ್ತದೆ. ಕೇಂದ್ರದ ಮಾರ್ಗಸೂಚಿ ಪ್ರಕಾರ ಬರ ಘೋಷಣೆ ಮಾಡುತ್ತೇವೆ. ಕೇಂದ್ರ ಸರ್ಕಾರಕ್ಕೆ ಮನವಿಯನ್ನೂ ಕೂಡಾ ನಾವು ನೀಡುತ್ತೇವೆ ಎಂದು ಹೇಳಿದರು.

Join Whatsapp
Exit mobile version