Home ಟಾಪ್ ಸುದ್ದಿಗಳು ಮದುವೆಯಾಗೋದಾಗಿ ನಂಬಿಸಿ ಮೋಸ: 72ರ ಅಜ್ಜನ ವಿರುದ್ಧ 63ರ ಅಜ್ಜಿ ದೂರು

ಮದುವೆಯಾಗೋದಾಗಿ ನಂಬಿಸಿ ಮೋಸ: 72ರ ಅಜ್ಜನ ವಿರುದ್ಧ 63ರ ಅಜ್ಜಿ ದೂರು

ಬೆಂಗಳೂರು: ಮದುವೆ ಆಗೋದಾಗಿ ನಂಬಿಸಿ 72 ವರ್ಷದ ವೃದ್ಧ ಮೋಸ ಮಾಡಿದ್ದಾನೆ ಎಂದು 63 ವರ್ಷದ ವೃದ್ಧೆ ಪೊಲೀಸರಿಗೆ ದೂರು ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ದಯಾಮಣಿ (63) ಎಂಬ ವೃದ್ಧೆ ಲೋಕನಾಥ್ (72) ಎಂಬ ವೃದ್ಧನ ವಿರುದ್ಧ ಬೆಂಗಳೂರಿನ ಪೂರ್ವ ವಿಭಾಗ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.


ಹಲಸೂರು ನಿವಾಸಿಯಾದ ದಯಾಮಣಿಗೆ ಮದುವೆ ಆಗಿ ಗಂಡ ಮರಣ ಹೊಂದಿದ್ದರು. ಲೋಕನಾಥ್ ಪತ್ನಿ ಕೂಡ ಮರಣ ಹೊಂದಿದ್ದು, ಮಗನಿಗೆ ಮದುವೆ ಮಾಡಿಸುವ ಸಲುವಾಗಿ ಹೆಣ್ಣು ನೋಡುತ್ತಿದ್ದರು. ಈ ವೇಳೆ ದಯಾಮಣಿ ಹೆಣ್ಣು ತೋರಿಸುವುದಾಗಿ ಲೋಕನಾಥ್ ಗೆ ಪರಿಚಯವಾಗಿದ್ದು, ಪರಿಚಯ ಪ್ರೀತಿಗೆ ತಿರುಗಿ ಮದುವೆ ಆಗುವ ನಿರ್ಧಾರಕ್ಕೆ ಬಂದಿದ್ದರು. ಆದರೆ ಇತ್ತೀಚಿಗೆ ಲೋಕನಾಥ್, ದಯಾಮಣಿಯನ್ನು ದೂರ ಮಾಡಲು ಶುರು ಮಾಡಿದ್ದರು. ಇದರಿಂದ ನೊಂದ ದಯಾಮಣಿ ಲೋಕನಾಥ್ ಗೆ ಫೋನ್ ಮಾಡಿ ಕೇಳಿದ ವೇಳೆ ಮದುವೆ ಆಗೋಕೆ ಆಗಲ್ಲ. ಅದೇನ್ ಮಾಡ್ಕೋತಿಯಾ ಮಾಡ್ಕೋ ಎಂದು ಹೇಳಿ ಫೋನ್ ಕಟ್ ಮಾಡಿದ್ದಾನೆ. ಇದರಿಂದ ಬೇಸತ್ತ ದಯಾಮಣಿ ನನಗೆ ನ್ಯಾಯ ಕೊಡಿಸಿ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Join Whatsapp
Exit mobile version