Home ಟಾಪ್ ಸುದ್ದಿಗಳು ಶೀಘ್ರದಲ್ಲೇ 6ನೇ ಗ್ಯಾರಂಟಿ ಘೋಷಣೆ: ಲಕ್ಷ್ಮಿ ಹೆಬ್ಬಾಳ್ಕರ್

ಶೀಘ್ರದಲ್ಲೇ 6ನೇ ಗ್ಯಾರಂಟಿ ಘೋಷಣೆ: ಲಕ್ಷ್ಮಿ ಹೆಬ್ಬಾಳ್ಕರ್

ರಾಮನಗರ: ಶೀಘ್ರದಲ್ಲೇ ಸರ್ಕಾರದ 6ನೇ ಗ್ಯಾರಂಟಿ ಘೋಷಣೆ ಮಾಡಲಾಗುವುದು. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಕಾಂಗ್ರೆಸ್ ಗ್ಯಾರಂಟಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಆಶಾಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗಾಗಿ 6ನೇ ಗ್ಯಾರಂಟಿ ಹೇಳಿದ್ದಾರೆ.
ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡ್ತೇವೆ. ಶೀಘ್ರದಲ್ಲೇ 6ನೇ ಗ್ಯಾರಂಟಿ ಘೋಷಣೆ ಆಗಲಿದೆ ಎಂದು ಹೇಳಿದರು.


ಕಳೆದ 5 ವರ್ಷದಿಂದ ಸಂಸದ ಡಿ.ಕೆ.ಸುರೇಶ್ ನಿಮ್ಮ ಸೇವೆ ಮಾಡಿದ್ದಾರೆ. ರಾಜಕಾರಣದಲ್ಲಿ ಅಧಿಕಾರ ಸಿಕ್ಕಾಗ ಜನಸೇವೆ ಮಾಡುವವರು ಬೆರಳೆಣಿಕೆ ಮಂದಿ. ಅದರಲ್ಲಿ ಡಿ.ಕೆ.ಸುರೇಶ್ ಕೂಡಾ ಒಬ್ಬರು. ಕಾಂಗ್ರೆಸ್ ಅಂದ್ರೆ ಬದ್ಧತೆ. ನಮ್ಮ ಸರ್ಕಾರ ಐದು ಗ್ಯಾರಂಟಿಗಳ ಜಾರಿ ಮಾಡಿ ನುಡಿದಂತೆ ನಡೆದಿದೆ ಎಂದರು.

Join Whatsapp
Exit mobile version