ಚೆನ್ನೈ: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5ರಷ್ಟು ವೈದ್ಯಕೀಯ ಕೋಟಾ ಮೀಸಲಿರಿಸುವ ತಮಿಳುನಾಡಿನ ನಿರ್ಧಾರವನ್ನು ಮದ್ರಾಸ್ ಹೈಕೋರ್ಟ್ ಎತ್ತಿ ಹಿಡಿದಿದೆ.
ಸರ್ಕಾರ ಘೋಷಣೆ ಮಾಡಿದ್ದ ಮೀಸಲಾತಿಯನ್ನು ಪ್ರಶ್ನಿಸಿ ಖಾಸಗಿ ಶಾಲಾ ವಿದ್ಯಾರ್ಥಿಗಳು ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳು ತಮಗೂ ಇದೇ ರೀತಿಯ ಸೌಲಭ್ಯಗಳನ್ನು ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಮುನೀಶ್ವರ್ ನಾಥ್ ಭಂಡಾರಿ ಮತ್ತು ನ್ಯಾಯಮೂರ್ತಿ ಡಿ ಭರತ ಚಕ್ರವರ್ತಿ ನೇತೃತ್ವದ ಮೊದಲ ಪೀಠ ಈ ತೀರ್ಪು ಪ್ರಕಟಿಸಿದೆ.