Home ಟಾಪ್ ಸುದ್ದಿಗಳು ಅರುಣಾಚಲ ಪ್ರದೇಶದಲ್ಲಿ ಭೀಕರ ಹಿಮಪಾತ: ಹಲವು ಸೇನಾ ಸಿಬ್ಬಂದಿಗಳಿಗೆ ಗಂಭೀರ ಗಾಯ

ಅರುಣಾಚಲ ಪ್ರದೇಶದಲ್ಲಿ ಭೀಕರ ಹಿಮಪಾತ: ಹಲವು ಸೇನಾ ಸಿಬ್ಬಂದಿಗಳಿಗೆ ಗಂಭೀರ ಗಾಯ

ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಭೀಕರ ಹಿಮಪಾತವಾಗಿದ್ದು, ಘಟನೆಯಲ್ಲಿ ಹಲವು ಸೇನಾ ಸಿಬ್ಬಂದಿಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಸದ್ಯ ಸೇನಾ ಗಸ್ತು ಪಡೆಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಹಿಮಪಾತದಿಂದ ಗಂಭೀರವಾಗಿ ಗಾಯಗೊಂಡ ಏಳು ಅಧಿಕಾರಿಗಳು ಗಸ್ತು ತಂಡದ ಭಾಗವಾಗಿದ್ದಾರೆ ಎಂದು ತೇಜ್‌ಪುರದ ರಕ್ಷಣಾ ಸಚಿವಾಲಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಹರ್ಷವರ್ಧನ್ ಪಾಂಡೆ ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ನೆರವಾಗಲು ವಿಶೇಷ ತಂಡಗಳನ್ನು ರಚಿಸಿ ಗಾಯಾಳುಗಳನ್ನು ಏರ್ ಲಿಫ್ಟ್ ಮಾಡಲಾಗಿದೆ. “ಕಳೆದ ಕೆಲವು ದಿನಗಳಿಂದ ಭಾರೀ ಹಿಮಪಾತದೊಂದಿಗೆ ಈ ಪ್ರದೇಶವು ಪ್ರತಿಕೂಲ ಹವಾಮಾನಕ್ಕೆ ಸಾಕ್ಷಿಯಾಗಿದೆ” ಎಂದು ಅವರು ಹೇಳಿದರು.

ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಗಡಿನಾಡಿನ ಎತ್ತರದ ಪ್ರದೇಶದಲ್ಲಿ ಈ ತಿಂಗಳು ಭಾರೀ ಹಿಮಪಾತಕ್ಕೆ ಸಾಕ್ಷಿಯಾಗುತ್ತಿದೆ. ಇಟಾ ನಗರದ ಡೇರಿಯಾ ಸಮೀಪದ ಬೆಟ್ಟದಲ್ಲಿ 34 ವರ್ಷಗಳ ನಂತರ ಭೀಕರ ಹಿಮಪಾತವನ್ನು ಕಂಡಿದೆ ಮತ್ತು ಅರುಣಾಚಲ ಪ್ರದೇಶದ ಪಶ್ಚಿಮ ಕಮೆಂಗ್ ಜಿಲ್ಲೆಯ ರೂಪ ಪಟ್ಟಣವು ಎರಡು ದಶಕಗಳ ನಂತರ ಹಿಮಪಾತಕ್ಕೆ ಸಾಕ್ಷಿಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

Join Whatsapp
Exit mobile version