ರಸ್ತೆ ಅಪಘಾತ: 7 ಜನ ಆಶಾ ಕಾರ್ಯಕರ್ತೆಯರು ಗಂಭೀರ

Prasthutha|

ಧಾರವಾಡ: ವಿವಿಧ ಬೇಡಿಕೆ ಈಡೇರಿಕೆಗಾಗಿ ಬೆಳಗಾವಿ ಸುವರ್ಣ ಸೌಧದ ಎದುರು ಪ್ರತಿಭಟನೆ ನಡೆಸಲು ಆಶಾ ಕಾರ್ಯಕರ್ತೆಯರನ್ನು ಕರೆದುಕೊಂಡು ಹೋಗುತ್ತಿದ್ದ ಟೆಂಪೋ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಏಳು ಜನ ಆಶಾ ಕಾರ್ಯಕರ್ತೆಯರು ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

- Advertisement -

ಧಾರವಾಡ ಜಿಲ್ಲೆಯ ತೇಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಬಳ್ಳಾರಿಯಿಂದ ಹಲವು ಅಂಗನವಾಡಿ ಕಾರ್ಯಕರ್ತೆಯರು ಬೆಳಗಾವಿ ಸುವರ್ಣ ಸೌಧದ ಎದುರು ಪ್ರತಿಭಟನೆ ಮಾಡಲು ಧಾರವಾಡ ಎನ್ ಹೆಚ್4 ಮಾರ್ಗವಾಗಿ ಬೆಳಗಾವಿಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಲಾರಿ ಹಾಗೂ ಆಶಾ ಕಾರ್ಯಕರ್ತೆಯರು ಹೋಗುತ್ತಿದ್ದ ಟೆಂಪೋ ವಾಹನಕ್ಕೆ ಡಿಕ್ಕಿಯಾಗಿ ಸುಮಾರು ಏಳು ಜನರಿಗೆ ಗಂಭೀರ ಗಾಯವಾಗಿದ್ದು, ಕೆಲವು ಕಾರ್ಯಕರ್ತೆಯರನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ಹಾಗೂ ಗಂಭೀರ ಗಾಯಾಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ಸಾಗಿಸಲಾಗಿದೆ.

ಸ್ಥಳೀಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಗರಗ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp