ಮಹಾರಾಷ್ಟ್ರ | ಆಮ್ಲಜನಕದ ಕೊರತೆಯಿಂದ 7 ಮಂದಿ ಕೊರೋನಾ ಸೋಂಕಿತರು ಸಾವು

Prasthutha|

ಮುಂಬೈ : ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ 7 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

- Advertisement -

ಮಹಾರಾಷ್ಟ್ರದ ನಳಸೋಪಾರಾದ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ 7 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಆಸ್ಪತ್ರೆಗೆ ದಾಖಲಾದ ಕೊರೊನಾ ವೈರಸ್ ರೋಗಿಗಳು ಆಮ್ಲಜನಕದ ಕೊರತೆಯಿಂದಾಗಿ ನಿಧನರಾಗಿದ್ದಾರೆ ಎಂದು ಮೃತರ ಸಂಬಂಧಿಕರು ಮತ್ತು ಸ್ಥಳೀಯರು ಆರೋಪಿಸಿದ್ದಾರೆ.

ಆದರೆ ಆಸ್ಪತ್ರೆಯ ಅಧಿಕಾರಿಗಳು ಈ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಸಾವನ್ನಪ್ಪಿದ ಎಲ್ಲಾ ರೋಗಿಗಳು ಗಂಭೀರ ಪರಿಸ್ಥಿತಿಯಲ್ಲಿದ್ದರು. ಆಮ್ಲಜನಕದ ಕೊರತೆಯು ಅವರ ಸಾವಿಗೆ ಕಾರಣವಲ್ಲ ಎಂದು ಹೇಳಿದ್ದಾರೆ.

Join Whatsapp