ಉಗಾಂಡಾ ಪ್ರಜೆ ಹೊಟ್ಟೆಯಲ್ಲಿದ್ದ 7 ಕೋಟಿ ಮೌಲ್ಯದ ಹೆರಾಯಿನ್ ವಶ

Prasthutha|

ಬೆಂಗಳೂರು: ಹೊಟ್ಟೆಯಲ್ಲಿ 7 ಕೋಟಿ ಮೌಲ್ಯದ 1 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಉಗಾಂಡಾದ ಡ್ರಗ್ಸ್ ಪೆಡ್ಲರ್ ನನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್  ಅಧಿಕಾರಿಗಳು ಬಂಧಿಸಿದ್ದಾರೆ.

- Advertisement -

ಶಾರ್ಜಾದಿಂದ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ 32 ವರ್ಷದ ಉಗಾಂಡಾದ‌ ಪ್ರಜೆ ಯನ್ನು ಅಧಿಕಾರಿಗಳು ವಶಕ್ಕೆ ಪಡೆದು ತಪಾಸಣೆ ನಡೆಸಿ ಬಂಧಿಸಿದ್ದಾರೆ.

ಬಂಧಿತನನ್ನು ಆಸ್ಪತ್ರೆಗೆ ದಾಖಲಿಸಿ ಆತನ ಹೊಟ್ಟೆಯಿಂದ 3 ದಿನಗಳ ಅವಧಿಯಲ್ಲಿ 79 ಕ್ಯಾಪ್ಸುಲ್ ಹೊರಗೆ ತೆಗೆಯಲಾಗಿದೆ.

- Advertisement -

ಹೆರಾಯಿನ್ ತುಂಬಿದ ಕ್ಯಾಪ್ಸುಲ್​​ ಗಳನ್ನು ನುಂಗಿ ಆತ ಸ್ಮಗ್ಲಿಂಗ್ ಮಾಡುತ್ತಿದ್ದ. 7 ಕೋಟಿ ಮೌಲ್ಯದ 1 ಕೆಜಿ ಹೆರಾಯಿನ್ ವಶಕ್ಕೆ ಪಡೆದು ಆತನ ವಿರುದ್ಧ ಎನ್ ​ಡಿಪಿಎಸ್ ಆ್ಯಕ್ಟ್ ಅಡಿ ಪ್ರಕರಣ ದಾಖಲಾಗಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಟ್ಟೆಯಲ್ಲಿ ಮಾದಕ ದ್ರವ್ಯ ಸಾಗಿಸುವಾಗ ಸಿಕ್ಕಿಬಿದ್ದ ಮೊದಲ ಪ್ರಕರಣ ಇದಾಗಿದೆ.

Join Whatsapp