ಆಂಧ್ರಪ್ರದೇಶ: ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ 7 ಮಂದಿ ಮೃತ್ಯು

Prasthutha|

ಕಡಪ: ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 7 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

- Advertisement -

ತಿರುಮಲದಿಂದ ತಾಡಿಪತ್ರಿಗೆ ತೆರಳುತ್ತಿದ್ದ ತೂಫಾನ್​ ವಾಹನಕ್ಕೆ ಕೊಂಡಾಪುರಂನ ಚಿತ್ರಾವತಿ ಸೇತುವೆ ಎದುರಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಏಳು ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಇನ್ನು ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಮೃತರನ್ನು ತಾಡಿಪತ್ರಿ ನಿವಾಸಿಗಳು ಎಂದು ಗುರುತಿಸಲಾಗಿದೆ. ವಾಹನದಲ್ಲಿ 11 ಮಂದಿ ಪ್ರಯಾಣಿಕರಿದ್ದರು.

Join Whatsapp