Home ಜಾಲತಾಣದಿಂದ ಆಂಧ್ರಪ್ರದೇಶ: ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ 7 ಮಂದಿ ಮೃತ್ಯು

ಆಂಧ್ರಪ್ರದೇಶ: ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ 7 ಮಂದಿ ಮೃತ್ಯು

ಕಡಪ: ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 7 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ತಿರುಮಲದಿಂದ ತಾಡಿಪತ್ರಿಗೆ ತೆರಳುತ್ತಿದ್ದ ತೂಫಾನ್​ ವಾಹನಕ್ಕೆ ಕೊಂಡಾಪುರಂನ ಚಿತ್ರಾವತಿ ಸೇತುವೆ ಎದುರಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಏಳು ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಇನ್ನು ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಮೃತರನ್ನು ತಾಡಿಪತ್ರಿ ನಿವಾಸಿಗಳು ಎಂದು ಗುರುತಿಸಲಾಗಿದೆ. ವಾಹನದಲ್ಲಿ 11 ಮಂದಿ ಪ್ರಯಾಣಿಕರಿದ್ದರು.

Join Whatsapp
Exit mobile version