ಭೀಕರ ಅಪಘಾತ: ಒಂದೇ ಕಾಲೇಜಿನ 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು

Prasthutha|

ಗುವಾಹಟಿ: ಕಾರು ಅಪಘಾತದಲ್ಲಿ ಅಸ್ಸಾಂ ಎಂಜಿನಿಯರಿಂಗ್ ಕಾಲೇಜಿನ 7 ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ.

- Advertisement -


ಗುವಾಹಟಿಯ ಜಾಲುಕ್ ಬಾರಿ ಪ್ರದೇಶದಲ್ಲಿರುವ ಎಇಸಿ ಕಾಲೇಜಿನ ಮೂರನೇ ವರ್ಷದ 10 ವಿದ್ಯಾರ್ಥಿಗಳು ಎಸ್ಯುವಿ ಕಾರಿನಲ್ಲಿ ಕಾಲೇಜು ಕ್ಯಾಂಪಸ್ ನಿಂದ ಹೊರಗೆ ಹೋಗುತ್ತಿದ್ದರು. ಈ ವೇಳೆ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಮತ್ತೊಂದು ಬದಿಯ ರಸ್ತೆಯಲ್ಲಿ ವೇಗವಾಗಿ ಬರುತ್ತಿದ್ದ ಬೊಲೆರೊ ಸರಕು ಸಾಗಣೆ ಕಾರಿಗೆ ಡಿಕ್ಕಿ ಹೊಡೆದಿದೆ.


ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ವಿರೂಪಗೊಂಡಿದ್ದು, ಸ್ಥಳದಲ್ಲೇ ಏಳು ವಿದ್ಯಾರ್ಥಿಗಳು ಮೃತರಾಗಿದ್ದಾರೆ.



Join Whatsapp