ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ ;7 ಮೀನುಗಾರರ ರಕ್ಷಣೆ

Prasthutha|

ಉಡುಪಿ : ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮಹಾರಾಷ್ಟ್ರದ ರತ್ನಗಿರಿ ಸಮೀಪ ಸಮುದ್ರದಲ್ಲಿ ಮುಳುಗಡೆಗೊಂಡಿದ್ದು ಅದರಲ್ಲಿದ್ದ 7 ಮೀನುಗಾರರನ್ನು ರಕ್ಷಿಸಲಾಗಿದೆ.

- Advertisement -

ಕಡೆಕಾರು ಪಡುಕರೆ ಭಗವಾನ್‌ದಾಸ್‌ ಕೋಟ್ಯಾನ್‌ ಅವರಿಗೆ ಸೇರಿದ ಬೋಟ್‌ ಮಲ್ಪೆಯಿಂದ ತೆರಳಿತ್ತು. ರತ್ನಗಿರಿಯ ಸಮೀಪ ಮೀನುಗಾರಿಕೆ ನಡೆಸುತ್ತಿರುವಾಗ ಗಟ್ಟಿಯಾದ ವಸ್ತು ಬೋಟಿನ ತಳಭಾಗಕ್ಕೆ ತಾಗಿದ್ದು ಪರಿಣಾಮ ಬೋಟಿನ ಒಳಕ್ಕೆ ನೀರು ಬರಲಾರಂಭಿಸಿತು. ಸಮೀಪದಲ್ಲಿದ್ದ ಬೋಟಿನವರಿಗೆ ಮಾಹಿತಿ ನೀಡಿದಾಗ, ತಕ್ಷಣ ಧಾವಿಸಿದ ಅವರು ಬೋಟಿನಲ್ಲಿದ್ದ ದೇವೇಂದ್ರ, ಸತೀಶ, ಮಾದಪ್ಪ, ನವೀನ, ಮಹೇಂದ್ರ, ಚಂದ್ರಕಾಂತ ಮತ್ತು ರವಿ ಅವರನ್ನು ರಕ್ಷಿಸಿದ್ದಾರೆ.

ಬೋಟ್‌ ಸಂಪೂರ್ಣ ಮುಳುಗಡೆಗೊಂಡಿದ್ದು ಅದರಲ್ಲಿದ್ದ ಡೀಸೆಲ್‌, ಮೀನು ಹಾಗೂ ಇನ್ನಿತರ ಪರಿಕರಗಳು ಸಮುದ್ರ ಪಾಲಾಗಿವೆ. ಸುಮಾರು 70 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.

Join Whatsapp