7 ಭ್ರೂಣಗಳು ಪತ್ತೆ: ತನಿಖೆಗೆ ಆದೇಶ

Prasthutha|

ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ಗ್ರಾಮದ ಹೊರವಲಯದಲ್ಲಿ ಡಬ್ಬಿಯೊಂದರಲ್ಲಿ ಗರ್ಭಪಾತವಾದ ಏಳು ಭ್ರೂಣದ ಅವಶೇಷಗಳು ಪತ್ತೆಯಾದ ಘಟನೆಯ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ತನಿಖೆಗೆ ಆದೇಶಿಸಿದೆ.

- Advertisement -

ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಬಸ್ ನಿಲ್ದಾಣದ ಬಳಿ ಸ್ಥಳೀಯ ನಿವಾಸಿಗಳು ಭ್ರೂಣಗಳನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ನಂತರ, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

“ಒಂದು ಡಬ್ಬಿಯಲ್ಲಿ ಏಳು ಭ್ರೂಣಗಳು ಕಂಡುಬಂದಿವೆ. ಜಿಲ್ಲಾ ಅಧಿಕಾರಿಗಳಿಗೆ ಮಾಹಿತಿ ನೀಡಿದ ಕೂಡಲೇ ಅಧಿಕಾರಿಗಳ ತಂಡವನ್ನು ರಚಿಸಿ ತನಿಖೆ ನಡೆಸಲಾಗುವುದು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ ಕೋಣಿ ಸುದ್ದಿಗಾರರಿಗೆ ತಿಳಿಸಿದರು.

Join Whatsapp