Home ಟಾಪ್ ಸುದ್ದಿಗಳು ಕಾರಿಗೆ ಟ್ರ್ಯಾಕ್ಟರ್ ಡಿಕ್ಕಿ: ಮೂವರು ಮಕ್ಕಳು ಸೇರಿ 7 ಮಂದಿ ಮೃತ್ಯು

ಕಾರಿಗೆ ಟ್ರ್ಯಾಕ್ಟರ್ ಡಿಕ್ಕಿ: ಮೂವರು ಮಕ್ಕಳು ಸೇರಿ 7 ಮಂದಿ ಮೃತ್ಯು

ಪಾಟ್ನಾ: ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದ ಕಾರೊಂದು ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದ ಖಗಾರಿಯಾ ಜಿಲ್ಲೆಯಲ್ಲಿ ನಡೆದಿದೆ.


ತುಟ್ಟಿ ಮೋಹನಪುರದಿಂದ ಮಾದಯ್ಯ ಬಿತ್ತಲ ಗ್ರಾಮಕ್ಕೆ ಕಾರು ಹಿಂದಿರುಗುತ್ತಿತ್ತು. ಎನ್ ಎಚ್ 31ರ ವಿದ್ಯಾರತನ್ ಪೆಟ್ರೋಲ್ ಪಂಪ್ ಸಮೀಪ ಟ್ರಾಕ್ಟರ್ಗೆ ಡಿಕ್ಕಿ ಹೊಡೆದ ಕಾರು ರಸ್ತೆ ಬದಿಗೆ ಉರುಳಿದೆ.


ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತರಲ್ಲಿ ಮೂವರು ಮಕ್ಕಳಿದ್ದಾರೆ ಎಂದು ಗೋಗ್ರಿಯ ಡಿಎಸ್ಪಿಯ ರಮೇಶ್ ಕುಮಾರ್ ತಿಳಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Join Whatsapp
Exit mobile version