ಮುಂಬೈ-ನಾಗ್ಪುರ ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ: 7 ಮಂದಿ ಮೃತ್ಯು

Prasthutha|

ಜಾಲ್ನಾ: ಮುಂಬೈ-ನಾಗ್ಪುರ ಎಕ್ಸ್ ಪ್ರೆಸ್ ವೇನಲ್ಲಿ(ಸಮೃದ್ಧಿ ಎಕ್ಸ್ ಪ್ರೆಸ್ ವೇ) ಶುಕ್ರವಾರ ತಡರಾತ್ರಿ ಎರಡು ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -


ಕಡವಂಚಿ ಗ್ರಾಮದ ಸಮೀಪ ಅಪಘಾತ ನಡೆದಿದೆ. ಮೃತರಲ್ಲಿ ಮೂವರು ಮುಂಬೈ ಮೂಲದವರಾಗಿದ್ದರೆ, ಉಳಿದವರು ಬುಲ್ಧಾನ ಜಿಲ್ಲೆಯ ನಿವಾಸಿಗಳಾಗಿದ್ದಾರೆ ಎಂದು ಅವರು ತಿಳಿಸಿದರು.


ನಾಗ್ಪುರದಿಂದ ಮುಂಬೈಗೆ ಹೋಗುತ್ತಿದ್ದ ಮಲ್ಟಿ ಯುಟಿಲಿಟಿ ವೆಹಿಕಲ್ (ಎಂಯುವಿ) ಕಾರು ಅದರ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದರು. ಮತ್ತೊಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಿದರು.

Join Whatsapp