ಭೋಪಾಲ್: ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 7 ಮಂದಿ ಮೃತಪಟ್ಟಿದ್ದು, 63 ಮಂದಿ ಗಂಭೀರವಾಗಿ ಗಾಯಗೊಂಡಿರುವ ಮಧ್ಯಪ್ರದೇಶದ ಹರ್ದಾ ಜಿಲ್ಲೆಯಲ್ಲಿ ನಡೆದಿದೆ.
ಇಂದು (ಮಂಗಳವಾರ) ಮಧ್ಯಾಹ್ನ 12 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಕಾರ್ಖಾನೆಯಲ್ಲಿ ಮತ್ತಷ್ಟು ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.