ಜೀಪ್ – ಲಾರಿ ನಡುವೆ ಅಪಘಾತ: 7 ಮಂದಿ ಸಾವು

Prasthutha|

ಭೋಪಾಲ್: ಸಿಮೆಂಟ್ ಮಿಕ್ಸರ್ ಲಾರಿ ಹಾಗೂ ಜೀಪ್ ನಡುವೆ ಅಪಘಾತ ಸಂಭವಿಸಿ 7 ಜನ ಮೃತಪಟ್ಟ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಮದ್ವಾಸ್ ನಲ್ಲಿ ನಡೆದಿದೆ.

- Advertisement -


ಲಾರಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮೇಲೆ ಉರುಳಿದೆ. ಇದರ ಪರಿಣಾಮ ಸ್ಥಳದಲ್ಲೇ 7 ಜನ ಮೃತಪಟ್ಟಿದ್ದಾರೆ. ಅಪಘಾತಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.


ಘಟನೆಯ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp