Home ಟಾಪ್ ಸುದ್ದಿಗಳು ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ: 7 ಮಂದಿ ಸಾವು

ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ: 7 ಮಂದಿ ಸಾವು

ಧಾರವಾಡ: ಟೆಂಪೋ ಟ್ರಾಕ್ಸ್ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ 7 ಮಂದಿ ಮೃತಪಟ್ಟಿದ್ದು, 13 ಮಂದಿಗೆ ಗಾಯಗಳಾಗಿರುವ ಘಟನೆ ಧಾರವಾಡದ ಬಾಡ ಕ್ರಾಸ್ ಬಳಿ ನಡೆದಿದೆ.

ಅನನ್ಯಾ (14), ಹರೀಶ್ (13), ಶಿಲ್ಪಾ (34), ನಿಲವ್ವ (60), ಮಧುಶ್ರೀ (20), ಮಹೇಶ್ವರ (11), ಶಂಭುಲಿಂಗಯ್ಯ (35) ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿದೆ.

ಅವರು ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿ ರಾತ್ರಿ 2ರ ಸುಮಾರಿಗೆ ಬೆನಕನಕಟ್ಟಿಗೆ ಮರಳುತ್ತಿದ್ದರು ಎಂದು ತಿಳಿದುಬಂದಿದೆ. 

ಈ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version