ಕಾರು ಅಪಘಾತ: ಬಿಜೆಪಿ ಶಾಸಕನ ಪುತ್ರ ಸೇರಿ 7ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಸಾವು

Prasthutha|

ವಾರ್ಧಾ: ಕಾರೊಂದು ಸೇತುವೆ ಮೇಲಿಂದ ಸುಮಾರು 50 ಅಡಿ ಕೆಳಗೆ ಬಿದ್ದ ಪರಿಣಾಮ ಬಿಜೆಪಿ ಶಾಸಕನ ಪುತ್ರ ಸೇರಿ 7ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿರುವ  ಘಟನೆ ಜಿಲ್ಲೆಯ ಹೊರವಲಯದ ವಾರ್ಧಾ-ಯವತ್ಮಾಲ್ ಹೆದ್ದಾರಿಯಲ್ಲಿ ನಡೆದಿದೆ.

- Advertisement -

ಮೃತ 7 ಮಂದಿ ಸಾವಂಗಿಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಅಪಘಾತದಲ್ಲಿ ಗೊಂಡಿಯಾ ಜಿಲ್ಲೆಯ ತಿರೋಡಾ ಶಾಸಕ ವಿಜಯ್ ರಹಂಗ್‌ ಡೇಲ್ ಅವರ ಪುತ್ರ ಆವಿಷ್ಕರ್ ಕೂಡ ಸಾವನ್ನಪ್ಪಿದ್ದಾರೆ.

ಜಿಲ್ಲೆಯ ಸೆಲ್ಸುರಾ ಪ್ರದೇಶದಲ್ಲಿ ರಾತ್ರಿ 1.30ರ ಸುಮಾರಿಗೆ ದಿಯೋಲಿಯಿಂದ ವಾರ್ಧಾ ಕಡೆಗೆ ಬರುತ್ತಿದ್ದ ಝೈಲೋ ಕಾರು ಸೇತುವೆಯಿಂದ ನೇರವಾಗಿ ಕೆಳಗೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp