ಮಹಾರಾಷ್ಟ್ರ : ಮಹಾರಾಷ್ಟ್ರದ ಪುಣೆಯಲ್ಲಿ ಮತ್ತೆ 7 ಹೊಸ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು , ಮಹಾರಾಷ್ಟ್ರದಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 8ಕ್ಕೆ ಏರಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12ಕ್ಕೆ ಏರಿಕೆ ಕಂಡಿದೆ.
ಇಂದು ಒಂದೇ ದಿನ ಮಹಾರಾಷ್ಟ್ರದಲ್ಲಿ ಹೊಸ 7 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು , ತೀವ್ರ ಆತಂಕಕ್ಕೆ ಕಾರಣವಾಗಿದೆ.
ಇತ್ತೀಚೆಗೆ ದೇಶದಲ್ಲಿ ಮೊದಲನೇ ಒಮಿಕ್ರಾನ್ ಪ್ರಕರಣವು ಕರ್ನಾಟಕದಲ್ಲಿ ಪತ್ತೆಯಾಗಿತ್ತು.