ಲಡಾಖ್: 26 ಮಂದಿಯನ್ನು ಹೊತ್ತೊಯ್ಯುತ್ತಿದ್ದ ವಾಹನವೊಂದು ಲಡಾಖ್’ನ ಶಯೋಕ್ ನದಿಗೆ ಬಿದ್ದ ಪರಿಣಾಮ ಏಳು ಭಾರತೀಯ ಯೋಧರು ಮೃತಪಟ್ಟಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ.
ಘಟನೆಯಲ್ಲಿ 19 ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.