ವಿಶ್ವಕಪ್ ನಲ್ಲಿ ಭಾರತ ಸೋತ ನಂತರ ಸಂಭ್ರಮಾಚರಣೆ ಆರೋಪ: ಕಾಶ್ಮೀರದಲ್ಲಿ 7 ವಿದ್ಯಾರ್ಥಿಗಳ ಬಂಧನ

Prasthutha|

ಶ್ರೀನಗರ: ನವೆಂಬರ್ 19 ರಂದು ನಡೆದಿದ್ದ ಐಸಿಸಿ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದ ಸೋಲನ್ನು ಸಂಭ್ರಮಿಸಿದ್ದಾರೆ ಎಂದು ಆರೋಪಿಸಿ ಕಾಶ್ಮೀರದ 7 ವಿದ್ಯಾರ್ಥಿಗಳನ್ನು ಅಲ್ಲಿನ ಪೊಲೀಸರು ಬಂಧಿಸಿದ್ದಾರೆ.

- Advertisement -


ಬಂಧಿತರು ಕಾಶ್ಮೀರದ ‘ಶೇರ್ ಏ ಕಾಶ್ಮೀರ್’ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಎಂಂಬುದು ಬಹಿರಂಗವಾಗಿದೆ.


ವಿಶ್ವಕಪ್ ಫೈನಲ್ ಪಂದ್ಯ ನಡೆದ ಮರುದಿನ ಜಮ್ಮು ಕಾಶ್ಮೀರದ ಹೊರಗಿನ ವಿದ್ಯಾರ್ಥಿಯೊಬ್ಬ ದಾಖಲಿಸಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದ್ದರೆ ವಿದ್ಯಾರ್ಥಿಗಳನ್ನು ನವೆಂಬರ್ 20ರಂದು ಬಂಧಿಸಲಾಗಿದೆ.

Join Whatsapp