ತೈಲ ಸಂಗ್ರಹ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ 7 ಮಂದಿ ಕಾರ್ಮಿಕರು ಮೃತ್ಯು

Prasthutha|

ಕಾಕಿನಾಡ: ತೈಲ ಸಂಗ್ರಹದ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಏಳು ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ.

- Advertisement -


ಕಾರ್ಮಿಕರು 24 ಅಡಿ ಆಳದ ತೈಲ ಟ್ಯಾಂಕರ್ ಅನ್ನು ಸ್ವಚ್ಛಗೊಳಿಸಲು ಒಬ್ಬೊಬ್ಬರಾಗಿ ಇಳಿದಿದ್ದರು. ಬಳಿಕ ಅಲ್ಲಿಯೇ ಉಸಿರುಗಟ್ಟಿ ಮೃತಪಟ್ಟಿದ್ದಾರೆ.


ಮೃತರರು ಕೇವಲ 10 ದಿನಗಳ ಹಿಂದೆಯಷ್ಟೇ ಕೆಲಸಕ್ಕೆ ಸೇರಿಕೊಂಡಿದ್ದರು. ಇವರಲ್ಲಿ ಐವರು ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಪಾಡೇರು ನಿವಾಸಿಗಳಾಗಿದ್ದು, ಇಬ್ಬರು ಅದೇ ಮಂಡಲದ ಪುಲಿಮೇರು ಗ್ರಾಮದವರು ಎಂದು ತಿಳಿದು ಬಂದಿದೆ.

- Advertisement -


ಕಾರ್ಖಾನೆ ಆಡಳಿತ ಮಂಡಳಿ ಅಗತ್ಯ ಮುಂಜಾಗ್ರತೆ ವಹಿಸದಿರುವುದು ದುರಂತಕ್ಕೆ ಕಾರಣವಾಗಿದೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ.



Join Whatsapp