700ಕ್ಕೂ ಅಧಿಕ ರೈತ ಮಹಿಳೆಯರ ಮಾಂಗಲ್ಯ ಕಸಿದವರು ನರೇಂದ್ರ ಮೋದಿ

Prasthutha|

ಕಲಬುರಗಿ: ಕೇಂದ್ರದಲ್ಲಿ ಮೂರು ಕರಾಳ ಕೃಷಿ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ 700ಕ್ಕೂ ಅಧಿಕ ರೈತ ಮಹಿಳೆಯರ ಮಾಂಗಲ್ಯ ಕಸಿದಿದ್ದು ನರೇಂದ್ರ ಮೋದಿ ಅವರೇ ಹೊರತು ಕಾಂಗ್ರೆಸ್ ಅಲ್ಲ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಹೇಳಿದ್ದಾರೆ.

- Advertisement -

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಸೋಲುವ ಹತಾಶೆಯಿಂದ ಪ್ರಧಾನಿ ಮೋದಿ ಅವರು, ಕಾಂಗ್ರೆಸ್ ಪಕ್ಷ ಮಹಿಳೆಯರ ಮಂಗಳಸೂತ್ರವನ್ನು ಕಿತ್ತುಕೊಳ್ಳುವುದಾಗಿ ಸುಳ್ಳು ಹೇಳಿದ್ದಾರೆ. ಆದರೆ, ಅವರು ತಂದ ಕರಾಳ ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಲು ಒತ್ತಾಯಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಒಂದು ವರ್ಷದವರೆಗೆ ಮಳೆ, ಗಾಳಿ, ಚಳಿ ಎನ್ನದೇ ಧರಣಿ ಕುಳಿತಿದ್ದರು. ಆ ಸಂದರ್ಭದಲ್ಲಿಯೇ 700ಕ್ಕೂ ಅಧಿಕ ರೈತರು ಮೃತಪಟ್ಟರು. ಹೀಗಾಗಿ, ಆ ರೈತರ ಹೆಂಡತಿಯರ ಮಂಗಳಸೂತ್ರವನ್ನು ಕಳೆದವರು ಮೋದಿಯವರೇ ಆಗಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷ ಎಂದಿಗೂ ಎಂದಿಗೂ ಮಂಗಳಸೂತ್ರ ಕಸಿಯುವ ಕೆಲಸ ಮಾಡಿಲ್ಲ. ಮೋದಿಯವರು ಅಧಿಕಾರಕ್ಕೆ ಬರುವುದಕ್ಕೆ ಮುಂಚೆಯೇ ಕೇಂದ್ರದಲ್ಲಿ ನಮ್ಮ ಪಕ್ಷದ ಸರ್ಕಾರ ಅಸ್ತಿತ್ವದಲ್ಲಿತ್ತು. ಆಗಲೂ ಹಲವು ಜನಪರ ಯೋಜನೆಗಳನ್ನು ತರುವ ಮೂಲಕ ಎಲ್ಲ ಜಾತಿ, ಸಮುದಾಯಗಳನ್ನು ಪ್ರಗತಿಯತ್ತ ಕೊಂಡೊಯ್ದಿತ್ತು ಎಂದು ಡಾ.ಅಜಯ್ ಸಿಂಗ್ ಹೇಳಿದ್ದಾರೆ.

Join Whatsapp