Home ಟಾಪ್ ಸುದ್ದಿಗಳು ಎಸ್ಸಿ-ಎಸ್ಟಿ ಸಮುದಾಯಗಳಿಗೆ 75 ಯೂನಿಟ್ ಉಚಿತ ವಿದ್ಯುತ್: ಬೊಮ್ಮಾಯಿ

ಎಸ್ಸಿ-ಎಸ್ಟಿ ಸಮುದಾಯಗಳಿಗೆ 75 ಯೂನಿಟ್ ಉಚಿತ ವಿದ್ಯುತ್: ಬೊಮ್ಮಾಯಿ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ಎಲ್ಲ ಸಮುದಾಯಗಳಿಗೆ ಮೊದಲ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಪೂರೈಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸೌಧದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬಾಬು ಜಗಜೀವನರಾಂ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪರಿಶಿಷ್ಟ ಜಾತಿ ಮತ್ತು ಪಂಗಡದ ಎಲ್ಲ ಸಮುದಾಯಗಳಿಗೆ ಮೊದಲ 75 ಯೂನಿಟ್ ವರೆಗೆ ಉಚಿತವಾಗಿ ಪೂರೈಸಲಾಗುವುದು ಎಂದರು.

ಪ್ರಸ್ತುತ ಕೆಲವು ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಕುಟೀರ ಜ್ಯೋತಿ ಯೋಜನೆ ಅಡಿ 40 ಯೂನಿಟ್ ಉಚಿತವಾಗಿ ನೀಡಲಾಗುತ್ತಿದ್ದು, ಇದನ್ನು 75 ಯೂನಿಟ್ ಗೆ ಹೆಚ್ಚಿಸುವುದರ ಜತೆಗೆ ಎಲ್ಲ ಎಸ್ಸಿ-ಎಸ್ಟಿ ಸಮುದಾಯಗಳಿಗೂ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Join Whatsapp
Exit mobile version