ಬೆಂಗಳೂರು: ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಆಗಸ್ಟ್ 4ರಿಂದ 15ರವರೆಗೆ ಬೆಂಗಳೂರಿನ ಲಾಲ್ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ದೇಶದ 76ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಈ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಇದು ಲಾಲ್ಬಾಗ್ನಲ್ಲಿ ನಡೆಯಲಿರುವ 214ನೇ ಫಲಪುಷ್ಪ ಪ್ರದರ್ಶನವಾಗಿರಲಿದೆ.
ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಭರದಿಂದ ಸಿದ್ಧತೆ ನಡೆಸುತ್ತಿದೆ. ಈ ಬಾರಿ ವಿಧಾನಸೌಧ ಹಾಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪರಿಕಲ್ಪನೆಯೊಂದಿಗೆ ಫಲಪುಷ್ಪ ಪ್ರದರ್ಶನ ಸಾಕಾರಗೊಳ್ಳಲಿದೆ. ಈ ಬಾರಿ ಫಲಪುಷ್ಪ ಪ್ರದರ್ಶನಕ್ಕೆ 2 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ.
ಗಣರಾಜ್ಯೋತ್ಸವ ಅಂಗವಾಗಿ ಈ ಹಿಂದೆ ಜನವರಿಯಲ್ಲಿ ಫಲಪುಷ್ಪ ಪ್ರದರ್ಶನ ನಡೆದಿತ್ತು. ಜನವರಿ 20ರಿಂದ 30ರವರೆಗೆ 213ನೇ ಫಲಪುಷ್ಪ ಪ್ರದರ್ಶನ ನಡೆದಿತ್ತು. 11 ದೇಶಗಳಿಂದ ತರಿಸಿದ್ದ 69 ವಿವಿಧ ಹೂವುಗಳನ್ನು ಪ್ರದರ್ಶನದಲ್ಲಿ ಇರಿಸಲಾಗಿತ್ತು. ಜತೆಗೆ ಹಲವಾರು ಬಗೆಯ ಸ್ಪರ್ಧೆಗಳನ್ನೂ ಏರ್ಪಡಿಸಲಾಗಿತ್ತು.
ಲಾಲ್ಬಾಗ್ನಲ್ಲಿ ಪ್ರತಿ ವರ್ಷ ಗಣರಾಜ್ಯೋತ್ವವ ಹಾಗೂ ಸ್ವಾತಂತ್ರ್ಯೋತ್ಸವದ ಅಂಗವಾಗಿ ಫ್ಲವರ್ ಶೋ ಏರ್ಪಡಿಸಲಾಗುತ್ತದೆ.