ಭೋಪಾಲ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಮಧ್ಯಪ್ರದೇಶ ಪ್ರವೇಶಿಸಿದೆ.
ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಬುಧವಾರ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಹೇಳಿದ್ದಾರೆ.
ಪ್ರಿಯಾಂಕಾ ಗಾಂಧಿ ಅವರು ಇದೇ ಮೊದಲ ಬಾರಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದು, ನಾಳೆಯಿಂದ ನಾಲ್ಕು ದಿನಗಳ ಕಾಲ ತಮ್ಮ ಸಹೋದರ ರಾಹುಲ್ ಗಾಂಧಿಗೆ ಜೊತೆ ಹೆಜ್ಜೆ ಹಾಕಲಿದ್ದಾರೆ.