7ನೇ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆ

Prasthutha|

ಮಡಿಕೇರಿ: 7ನೇ ತರಗತಿಯ ವಿದ್ಯಾರ್ಥಿನಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಶಿವರಹಳ್ಳಿ ಗ್ರಾಮದಲ್ಲಿ ನಡೆದಿದೆ.

ವೈಷ್ಣವಿ (13) ಆತ್ಮಹತ್ಯೆಗೆ ಮಾಡಿಕೊಂಡ ವಿದ್ಯಾರ್ಥಿನಿ.

- Advertisement -

ಸೋಮವಾರಪೇಟೆಯ ಖಾಸಗಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ವೈಷ್ಣವಿ ಕಳೆದ ಒಂದು ವಾರದಿಂದಲೂ ಖಿನ್ನತೆಯಿಂದ ಬಳಲುತ್ತಿದ್ದಳು. ಭಾನುವಾರ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

- Advertisement -