Home ಟಾಪ್ ಸುದ್ದಿಗಳು 8 ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುತ್ತಾರೆ: ಬಾಂಬ್ ಸಿಡಿಸಿದ ಬಿಜೆಪಿ ಶಾಸಕ

8 ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುತ್ತಾರೆ: ಬಾಂಬ್ ಸಿಡಿಸಿದ ಬಿಜೆಪಿ ಶಾಸಕ

ಬೆಂಗಳೂರು: ಸಿಪಿ ಯೋಗೇಶ್ವರ್ ಅವರು ಬಿಜೆಪಿ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದರ ನಡುವೆ ಬಿಜೆಪಿಯ ಇನ್ನೂ 8 ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಹೊಸ ಬಾಂಬ್ ಸಿಡಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಕಾಂಗ್ರೆಸ್ ಗೆ 8 ಜನ ಶಾಸಕರು ಹೋಗುತ್ತಾರೆ. ಅದರಲ್ಲೂ ಬೆಂಗಳೂರಿನ ಇಬ್ಬರು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ. ನನ್ನ ಮೇಲೆ ಯಾವುದೇ ಶಿಸ್ತು ಕ್ರಮ ಜರುಗಿಸಿದ್ರು ನನಗೆ ಭಯವಿಲ್ಲ. ಅಶೋಕ್ ಮಾತಿಗೆ ಬೆಲೆ ಕೊಡಬಾರದು. ಸದ್ಯದಲ್ಲಿ ನೋಡುತ್ತಿರಿ ಇನ್ನು ಎಂಟು ಮಂದಿ ಕಾಂಗ್ರೆಸ್ ಗೆ ಹೋಗುತ್ತಾರೆ ಎಂದು ಬಹಿರಂಗವಾಗಿಯೇ ಹೇಳಿದರು.

ನನ್ನ ಮೇಲೆ ಯಾವುದೇ ಶಿಸ್ತು ಕ್ರಮ ಜರುಗಿಸಿದ್ರು ನನಗೆ ಭಯವಿಲ್ಲ. ನನಗೆ ನನ್ನ ಕ್ಷೇತ್ರದ ಅಭಿವೃದ್ಧಿಯಾಗಬೇಕು. ಅದಕ್ಕೆ ನಾನು ನಿರಂತರವಾಗಿ ಸಿಎಂ ಹಾಗೂ ಡಿಸಿಎಂ ಅವರನ್ನು ಭೇಟಿ ಮಾಡುತ್ತೇನೆ. ಸಿಪಿ ಯೋಗೇಶ್ವರ್ ರಿಂದ ಚೆನ್ನಾಗಿ ಕೆಲಸ ಮಾಡಿಸಿಕೊಂಡು ಈಗ ಕೈ ಬಿಟ್ಟರು ಎಂದು ಸ್ವಪಕ್ಷದ ವಿರುದ್ಧವೇ ಗುಡುಗಿದರು.

Join Whatsapp
Exit mobile version