ಕತಾರ್ ಕಂಪನಿಯಲ್ಲಿ ಕೆಲಸಕ್ಕಿದ್ದ 8 ಮಾಜಿ ಭಾರತೀಯ ನೌಕಾಪಡೆಯ ಅಧಿಕಾರಿಗಳ ಬಂಧನ

Prasthutha|

ದೋಹಾ: ಕತಾರ್ ಎಮಿರಿ ನೌಕಾಪಡೆಗೆ ತರಬೇತಿ ಮತ್ತು ಇತರ ಸೇವೆಗಳನ್ನು ಒದಗಿಸುವ ಕಂಪನಿಯೊಂದಿಗೆ ಕತಾರ್ ನಲ್ಲಿ ಕೆಲಸ ಮಾಡುತ್ತಿದ್ದ ಎಂಟು ಮಾಜಿ ಭಾರತೀಯ ನೌಕಾಪಡೆಯ ಅಧಿಕಾರಿಗಳನ್ನು ದೋಹಾದಲ್ಲಿ ಬಂಧಿಸಲಾಗಿದೆ.

- Advertisement -

ದೋಹಾದಲ್ಲಿರುವ ಡಾ.ಮೀತು ಭಾರ್ಗವ ಎಂಬವರ ಟ್ವೀಟ್ ಮೂಲಕ ಈ ಘಟನೆ ಬೆಳಕಿಗೆ ಬಂದಿದ್ದು, ದೋಹಾದಲ್ಲಿ 57 ದಿನಗಳಿಂದ ಮಾಜಿ ಭಾರತೀಯ ನೌಕಾಪಡೆಯ ಅಧಿಕಾರಿಗಳು ಕಾನೂನುಬಾಹಿರ ಬಂಧನದಲ್ಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಈ ಪೋಸ್ಟ್ ಗೆ ಅವರು ಪ್ರಧಾನಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಪುರಿ ಸೇರಿದಂತೆ ಹಲವಾರು ಸಚಿವರನ್ನು ಟ್ಯಾಗ್ ಮಾಡಿದ್ದಾರೆ.

ನೌಕಾಪಡೆಯ ಮಾಜಿ ಅಧಿಕಾರಿಗಳು ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಮತ್ತು ಕನ್ಸಲ್ಟೆನ್ಸಿ ಸರ್ವೀಸಸ್ ಎಂಬ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ದಿ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. ಕಸ್ಟಡಿಯಲ್ಲಿರುವ ಎಂಟು ಭಾರತೀಯರಲ್ಲಿ ನಿವೃತ್ತ ಕಮಾಂಡರ್ ಪೂರ್ಣೇಂದು ತಿವಾರಿ ಕೂಡಾ ಸೇರಿದ್ದಾರೆ

- Advertisement -

ಘಟನೆಯ ಬಗ್ಗೆ ದೋಹಾದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಕೂಡಾ ತಿಳಿದಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಯಾಕೆ ಎಂಟು ಮಂದಿಯನ್ನು ಬಂಧಿಸಲಾಯ್ತು ಮತ್ತು ಅವರ ವಿರುದ್ಧದ ಆರೋಪಗಳು ಯಾವುವು ಎಂಬುದರ ಬಗ್ಗೆ ಯಾವುದೇ ವಿವರಗಳು ಇನ್ನೂ ಲಭ್ಯವಾಗಿಲ್ಲ.

Join Whatsapp