ಒಮಾನ್: ಇಲ್ಲಿನ ಕರಾವಳಿಯಲ್ಲಿ ಹಡಗು ಮುಳುಗಿ ನಾಪತ್ತೆಯಾಗಿದ್ದ 16 ಮಂದಿಯಲ್ಲಿ ಒಂಬತ್ತು ಸಿಬ್ಬಂದಿಯನ್ನು ರಕ್ಷಿಸಲಾಗಿದೆ ಎಂದು ಮೂಲಗಳು ಹೇಳಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.
ಒಂಬತ್ತು ಸದಸ್ಯರಲ್ಲಿ ಎಂಟು ಮಂದಿ ಭಾರತೀಯರು ಮತ್ತು ಒಬ್ಬರು ಶ್ರೀಲಂಕಾದವರು ಎಂದು ಮೂಲಗಳು ತಿಳಿಸಿವೆ. ಒಮಾನ್ನ ಪ್ರಮುಖ ಬಂದರು ಡುಗ್ಮ್ ನಿಂದ ಹೊರಟಿದ್ದ ಪ್ರೆಸ್ಟೀಜ್ ಪಾಲ್ಕನ್ ಹಡಗು ಒಮಾನ್ ಸಾಗರ ಪ್ರದೇಶದಲ್ಲಿ ಮಗುಚಿದೆ. ಈ ಹಡಗಿನಲ್ಲಿ ಪೂರ್ವ ಕಾರ್ಮೋಸ್ ದೇಶದ ತೈಲ ಟ್ಯಾಂಕರ್ ಇತ್ತು ಎಂದು ಸಾಗರ ಭದ್ರತಾ ಕೇಂದ್ರ ಹೇಳಿದೆ.
ಈ ಹಡಗು ಯೆಮನ್ ನ ಅದೆನ್ಗೆ ಹೊರಟಿತ್ತು ಎಂದು ಹೇಳಲಾಗಿದೆ.
ಡುಗ್ಮ್ ಬಂದರು ಒಮಾನ್ ನ ನೈಋತ್ಯ ಕರಾವಳಿಯಲ್ಲಿದೆ. ಇದು ಸುಲ್ತಾನೇಟ್‌ನ ಪ್ರಮುಖ ತೈಲ ಮತ್ತು ಅನಿಲ ಗಣಿಗಾರಿಕೆ ಯೋಜನೆಗಳಿಗೆ ಸಮೀಪದಲ್ಲಿದೆ.