ಉತ್ತರಾಖಂಡ | ಕಮರಿಗೆ ಬಿದ್ದ ಟೆಂಪೊ ಟ್ರಾವೆಲರ್: 8 ಮಂದಿ ಸಾವು

Prasthutha|

ಉದ್ರಪ್ರಯಾಗ: ಟೆಂಪೊ ಟ್ರಾವೆಲರ್ ಕಮರಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಉತ್ತರಾಖಂಡದ ರಿಷಿಕೇಶ-ಬದರಿನಾಥ ಹೆದ್ದಾರಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಎನ್ ಡಿಆರ್ ಎಫ್ ಅಧಿಕಾರಿ ಮಣಿಕಾಂತ್ ಮಿಶ್ರಾ ತಿಳಿಸಿದ್ದಾರೆ.


ಘಟನೆಯ ಕುರಿತು ಪ್ರತಿಕ್ರಿಯಿಸಿದ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ‘ರುದ್ರಪ್ರಯಾಗ ಜಿಲ್ಲೆಯಲ್ಲಿ ಸಂಭವಿಸಿದ ಟೆಂಪೊ ಟ್ರಾವೆಲರ್ ಅಪಘಾತದ ಸುದ್ದಿ ತಿಳಿದು ಮನಸ್ಸಿಗೆ ದುಃಖವಾಗಿದೆ. ಸ್ಥಳೀಯಾಡಳಿತ ಮತ್ತು ಎಸ್ಡಿಆರ್ಎಫ್ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸಾಗಿಸಲಾಗುತ್ತಿದೆ. ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಲಾಗಿದೆ’ ಎಂದು ತಿಳಿಸಿದ್ದಾರೆ.

- Advertisement -

Join Whatsapp