ನವದೆಹಲಿ | ಕೆಮಿಕಲ್ ಕಾರ್ಖಾನೆಯಲ್ಲಿ ಬೆಂಕಿ ಅವಘಡ; 8 ಮಂದಿ ಬಲಿ

Prasthutha|

ನವದೆಹಲಿ: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆವೊಂದರಲ್ಲಿ ನಡೆದ ಬೆಂಕಿ ಅವಘಡದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿವೆ.

- Advertisement -

ಕಾರ್ಖಾನೆಯ ಬಾಯ್ಲರ್ ಸ್ಫೋಟದಿಂದಾಗಿ ಈ ದುರ್ಷಟನೆ ನಡೆದಿದೆ ಎಂದು ಸಚಿವ ನಂದ ಗೋಪಾಲ್ ಗುಪ್ತ ತಿಳಿಸಿದ್ದಾರೆ.

ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇನ್ನು ಹಲವರು ಕಾರ್ಖಾನೆಯೊಳಗೆ ಸಿಲುಕಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ. ಹಲವು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಮುಖ್ಯಮಂತ್ರಿ ಆದಿತ್ಯನಾಥ್ ಮೃತ ಕುಟುಂಬಗಳಿಗೆ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, ರಕ್ಷಣಾ ಮೇಲ್ವಿಚಾರಣೆ, ಪರಿಹಾರ ಕ್ರಮ ಮತ್ತು ಕುಟುಂಬಗಳಿಗೆ ಅಗತ್ಯವಿರುವ ಎಲ್ಲಾ ನೆರವನ್ನು ನೀಡುವಂತೆ ಮುಖ್ಯಮಂತ್ರಿಗಳು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ ಎಂದು ಕಚೇರಿ ಮೂಲಗಳು ತಿಳಿಸಿವೆ.

Join Whatsapp