ಅಮೆರಿಕ: 2 ಮನೆಗಳಲ್ಲಿ ಗುಂಡಿನ ದಾಳಿ, 8 ಮಂದಿ ಸಾವು

Prasthutha|

ಚಿಕಾಗೋ: ಅಮೆರಿಕದ ಚಿಕಾಗೋ ಎಂಬಲ್ಲಿ ಎರಡು ಮನೆಗಳ ಮೇಲೆ ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

- Advertisement -

ಚಿಕಾಗೋ ನಗರದಿಂದ ದೂರದಲ್ಲಿರುವ ಉಪನಗರಗಳಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಇಲಿನಾಯ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಗುಂಡಿನ ದಾಳಿಯ ಉದ್ದೇಶ ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಘಟನೆಯ ಕುರಿತು ತನಿಖೆ ನಡೆಸುತ್ತಿದ್ದು, ಕೊಲೆಯ ಹಿಂದಿನ ಕಾರಣವನ್ನು ಕಂಡುಹಿಡಿಯಲು ಇನ್ನೂ ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶೂಟರ್‌ಗೆ ಮೃತರ ಬಗ್ಗೆ ಮೊದಲೇ ಮಾಹಿತಿ ಇತ್ತು ಎಂದು ಪೊಲೀಸರು ಹೇಳಿದ್ದಾರೆ. ಸ್ಥಳೀಯ ಪೊಲೀಸರು ಎಫ್‌ಬಿಐ ಕಾರ್ಯಪಡೆಯ ನೆರವಿನೊಂದಿಗೆ ಆರೋಪಿಗಾಗಿ ವ್ಯಾಪಕ ಶೋಧ ನಡೆಸುತ್ತಿದ್ದಾರೆ.



Join Whatsapp