ನವದೆಹಲಿ: ಸಂಸತ್ತಿನಲ್ಲಿ ಕಲಾಪ ನಡೆಯುತ್ತಿದ್ದಾಗಲೇ ಎದುರಾದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಲೋಕಸಭೆ ಸಚಿವಾಲಯ ಎಂಟು ಮಂದಿ ಭದ್ರತಾ ಸಿಬ್ಬಂದಿಯನ್ನು ಅಮಾನತು ಮಾಡಿದೆ.
ಸಂಸತ್ತಿನಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿರುವ ಸಮಯದಲ್ಲಿ ವೀಕ್ಷಕರ ಗ್ಯಾಲರಿಯಿಂದ ಜಿಗಿದು, ಅಶ್ರುವಾಯು ಸಿಡಿಸಿರುವ ಘಟನೆ ಇಡಿ ದೇಶವನ್ನೇ ಬೆಚ್ಚಿ ಬೀಳಿಸಿದೆ. ಇದೇ ಸಮಯದಲ್ಲಿ ಸಂಸತ್ ನ ಹೊರಗೂ ಇಬ್ಬರು ಪ್ರತಿಭಟನೆ ನಡೆಸಿದ್ದಾರೆ. ಕೃತ್ಯದಲ್ಲಿ ಒಟ್ಟು ಆರು ಮಂದಿ ಭಾಗಿಯಾಗಿದ್ದು, ಮೈಸೂರು ನಿವಾಸಿ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಇನ್ನೊಬ್ಬನಿಗಾಗಿ ಶೋಧ ಮುಂದುವರಿದಿದೆ.