ನವದೆಹಲಿ: ಪ್ರಧಾನಿ ಮೋದಿ ಹಾಗೂ ಕೇಂದ್ರದ ಯೋಜನೆ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಕೇಂದ್ರ ಸರ್ಕಾರವು 8 ಯುಟ್ಯೂಬ್ ಚಾನೆಲ್ ಗಳನ್ನು ನಿಷೇಧ ಮಾಡಿದೆ.
- Yahan Sach Dekho
- Capital TV
- KPS News
- Sarkari Vlog
- Earn Tech India
- SPN9 News
- 7 Educational Dost
- 8 World Best News
ಯೂಟ್ಯೂಬ್ ಚಾನೆಲ್ ಗಳಲ್ಲಿ ಸುಳ್ಳು ಸುದ್ದಿಗಳ ವಿಡಿಯೋಗಳನ್ನು ಹರಡಿದ್ದಕ್ಕಾಗಿ ಪತ್ರಿಕಾ ಮಾಹಿತಿ ಬ್ಯೂರೋ ಸತ್ಯಾಸತ್ಯತೆಯನ್ನು ಪರಿಶೀಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದರ ಆಧಾರದ ಮೇಲೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಅವುಗಳ ಮೇಲೆ ನಿಷೇಧ ಹೇರಿದೆ ಎಂದು ಹೇಳಲಾಗಿದೆ.