Home ಟಾಪ್ ಸುದ್ದಿಗಳು 80 ವರ್ಷಗಳ ಹಳೆಯ ಕಟ್ಟಡ ಕುಸಿತ: ಮಗು ಸೇರಿ ಮೂವರು ದುರ್ಮರಣ

80 ವರ್ಷಗಳ ಹಳೆಯ ಕಟ್ಟಡ ಕುಸಿತ: ಮಗು ಸೇರಿ ಮೂವರು ದುರ್ಮರಣ

ಡಿಯೋರಿಯಾ(ಉತ್ತರ ಪ್ರದೇಶ): ಸುಮಾರು 80 ವರ್ಷಗಳಷ್ಟು ಹಳೆಯದಾದ ಎರಡಂತಸ್ತಿನ ಕಟ್ಟಡ ಕುಸಿದು ಎರಡು ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ನಡೆದಿದೆ.

ಮೃತರನ್ನು ದಿಲೀಪ್ (35), ಚಾಂದನಿ (30) ಹಾಗೂ ಎರಡು ವರ್ಷದ ಮಗು ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಹೊರೆತೆಗೆದು ಮರಣೋತ್ತರ ಪರೀಕ್ಷೆಗೋಸ್ಕರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ರಾಜ್ಯದಲ್ಲಿ ಕಳೆದ ಎರಡ್ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಹೀಗಾಗಿ ಗೋಡೆ ತೇವಗೊಂಡು ಕಟ್ಟಡ ಕುಸಿದು ಬಿದ್ದಿದೆ ಎನ್ನಲಾಗಿದೆ.

ಮಳೆಯಿಂದಾಗಿ ಕಳೆದ ಎರಡು ದಿನಗಳಿಂದ ನಡೆದ ವಿವಿಧ ಘಟನೆಗಳಲ್ಲಿ 12 ಜನರು ಪ್ರಾಣ ಕಳೆದುಕೊಂಡಿದ್ದಾರೆ.

Join Whatsapp
Exit mobile version