ಚೈತ್ರಾ ಮತ್ತು ಗ್ಯಾಂಗ್ ವಿರುದ್ಧ 800 ಪುಟಗಳ ಚಾರ್ಜ್ ಶೀಟ್

Prasthutha|

ಬೆಂಗಳೂರು: ಬಿಜೆಪಿ ಎಂಎಲ್‌ಎ ಟಿಕೆಟ್ ಕೊಡಿಸೋದಾಗಿ ಬಿಜೆಪಿ ನಾಯಕನಿಗೆ ಕೋಟ್ಯಂತರ ರೂ. ವಂಚಿಸಿದ ಪ್ರಕರಣದ ಚೈತ್ರಾ ಮತ್ತು ಇತರ ಎಂಟು ಆರೋಪಿಗಳ ವಿರುದ್ಧ ಸಿಸಿಬಿ ಚಾರ್ಜ್‌ಶೀಟ್ ಸಲ್ಲಿಸಿದೆ. ಈ ಚಾರ್ಜ್ ಶೀಟ್ 800 ಪುಟಗಳನ್ನು ಹೊಂದಿದ್ದು, 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಲಾಗಿದೆ. ಕೇಂದ್ರ ನಗರ ಅಪರಾಧ ವಿಭಾಗ ಮೊದಲ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೆ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ.

- Advertisement -

4.11 ಕೋಟಿ ನಗದು ವಶಪಡಿಸಿಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ಧ ಪ್ರಾಥಮಿಕ, ಸಾಂದರ್ಭಿಕ ಹಾಗೂ ಡಿಜಿಟಲ್ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದರು. ಬಿಜೆಪಿ ನಾಯಕ ಹಾಗೂ ಉದ್ಯಮಿ ಗೋವಿಂದ ಬಾಬು ಪೂಜಾರಿ 10 ವಿಡಿಯೋ ಹಾಗೂ ಆಡಿಯೋ ದಾಖಲೆಗಳನ್ನು ಪೊಲೀಸರಿಗೆ ಒಪ್ಪಿಸಿದ್ದರು.

ಚೈತ್ರಾ ಸೇರಿದಂತೆ ಎಲ್ಲಾ ಆರೋಪಿಗಳು ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿದ್ದಾರೆ. .



Join Whatsapp