ಬೆಂಗಳೂರು: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮಕ್ಕೆ ದಿನಾಂಕ ಹಾಗೂ ಸ್ಥಳ ನಿಗದಿಯಾಗಿದೆ.
ಮುಂದಿನ ವರ್ಷ 2023 ರ ಜನವರಿ 06,07 ಮತ್ತು 08 ರಂದು ಹಾವೇರಿಯಲ್ಲಿ ಕಾರ್ಯಕ್ರಮವು ಜರುಗಲಿಕ್ಕಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಇಂದು ಸುನಿಲ್ ಕುಮಾರ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಎಲ್ಲಾ ಬಗೆಯ ಪೂರ್ವ ನಿಯೋಜನೆಯ ಕಾರ್ಯ ವೈಖರಿ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು.
ಸಮ್ಮೇಳನದಲ್ಲಿ ಎಂಟರಿಂದ ಹತ್ತು ಲಕ್ಷ ಜನ ಸೇರುವ ನಿರೀಕ್ಷೆಯಿದೆ. ಪ್ರತಿ ದಿನ 2.50 ಲಕ್ಷ ಜನರಿಗೆ ಊಟೋಪಚಾರ, 30 ಸಾವಿರ ಮಂದಿಗೆ ವಸತಿ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.