ಹಾವೇರಿ: 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Prasthutha|

ಹಾವೇರಿ: ಹಾವೇರಿಯಲ್ಲಿ ಇಂದಿನಿಂದ ಜ.8 ರವರೆಗೆ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರ, ನಾಡ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಮಾಡುವುದರ ಮೂಲಕ ಚಾಲನೆ ನೀಡಲಾಯಿತು.

- Advertisement -


ರಾಷ್ಟ್ರ ಧ್ವಜವನ್ನು ಕಾರ್ಮಿಕ ಇಲಾಖೆ ಹಾಗೂ ಹಾವೇರಿ ಜಿಲ್ಲಾ ಉಸ್ತವಾರಿ ಸಚಿವ ಶಿವರಾಮ ಹೆಬ್ಬಾರ್, ಸಾಹಿತ್ಯ ಪರಿಷತ್ತಿನ ಧ್ವಜವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್ ಜೋಶಿ, ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಬಿ ಹಿರೇಮಠ ನಾಡ ಧ್ವಜದ ಧ್ವಜಾರೋಹಣ ನೆರವೇರಿಸಿದರು.


ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆ ಮುಂಭಾಗದಲ್ಲಿ ಮುಂಜಾನೆ 7 ಗಂಟೆಗೆ ಸರಿಯಾಗಿ ಧ್ವಜಾರೋಹಣ ನೆರವೇರಿತು.

Join Whatsapp