88% ರಷ್ಟು 2 ಸಾವಿರ ರೂ. ನೋಟುಗಳು ಬ್ಯಾಂಕಿಗೆ ವಾಪಸ್ ಆಗಿವೆ: ಆರ್‌ಬಿಐ

Prasthutha|

ಹೊಸದಿಲ್ಲಿ: ಚಲಾವಣೆಯಿಂದ 2,000 ರೂ. ಮುಖಬೆಲೆಯ ನೋಟುಗಳನ್ನು ಹಿಂಪಡೆಯುವುದಾಗಿ ಘೋಷಣೆ ಮಾಡಿದ ಬಳಿಕ ಇದುವರೆಗೆ ಸುಮಾರು 88% ರಷ್ಟು ಹಣ ಬ್ಯಾಂಕುಗಳಿಗೆ ವಾಪಸ್ಸಾಗಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಹೇಳಿದೆ.

- Advertisement -

ಮೇ 19ರಂದು ಆರ್‌ಬಿಐ 2,000 ರೂ. ಮುಖಬೆಲೆಯ ನೋಟುಗಳನ್ನು ಹಿಂಪಡೆಯುವುದಾಗಿ ಘೋಷಣೆ ಮಾಡಿದ್ದು, ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿದೆ. ಜುಲೈ 31ರ ಬ್ಯಾಂಕ್ ವ್ಯವಹಾರ ಮುಕ್ತಾಯದ ವೇಳೆ 88% ರಷ್ಟು ನೋಟುಗಳನ್ನು ಹಿಂಪಡೆಯಲಾಗಿದೆ. ಇವುಗಳ ಪೈಕಿ 87% ರಷ್ಟು ನೋಟುಗಳು ಠೇವಣಿ ರೂಪದಲ್ಲಿ ಜಮೆಯಾಗಿದೆ ಎಂದು ತಿಳಿಸಿದೆ.

2016ರ ನವೆಂಬರ್ 8 ರಂದು 500 ಹಾಗೂ 1,000 ಮುಖಬೆಲೆಯ ನೋಟು ಅಮಾನ್ಯೀಕರಣದ ನಂತರ ಹೊಸದಾಗಿ 2,000 ರೂ. ನೋಟುಗಳನ್ನು ಪರಿಚಯಿಸಲಾಗಿತ್ತು. ಆದರೆ 2018ರಲ್ಲಿಯೇ 2,000 ರೂ. ನೋಟುಗಳ ಮುದ್ರಣವನ್ನು ಸ್ಥಗಿತಗೊಳಿಸಲಾಗಿತ್ತು. ಈ ಕುರಿತಾಗಿ ಸದನಕ್ಕೆ ಕೇಂದ್ರ ಸರ್ಕಾರ ಮಾಹಿತಿ ನೀಡಿತ್ತು.

- Advertisement -

ಇದೀಗ ಕ್ಲೀನ್ ನೋಟ್ ಅಭಿಯಾನದಡಿ ನೋಟ್‍ಗಳನ್ನು ಹಿಂಪಡೆಯಲು ಆರ್‌ಬಿಐ ಮುಂದಾಗಿದೆ. 2023ರ ಮೇ 23 ರಿಂದ ಯಾವುದೇ ಬ್ಯಾಂಕ್‍ನಲ್ಲಿ 2,000 ರೂ. ನೋಟುಗಳನ್ನು ಇತರ ಮುಖಬೆಲೆಯ ನೋಟುಗಳಾಗಿ ವಿನಿಮಯ ಮಾಡಿಕೊಳ್ಳಬಹುದು ಎಂದು ಆರ್‌ಬಿಐ ಸೂಚಿಸಿತ್ತು.

Join Whatsapp