8ನೇ ಆವೃತ್ತಿಯ ಪ್ರೊ ಕಬಡ್ಡಿ ; ಮೊದಲ ಹಂತದ ವೇಳಾಪಟ್ಟಿ ಬಿಡುಗಡೆ

Prasthutha: December 1, 2021

ಬೆಂಗಳೂರು: ಐಪಿಎಲ್-2022 ಟೂರ್ನಿಗೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ಪ್ರೊ ಕಬಡ್ಡಿ ಲೀಗ್ ಟೂರ್ನಿಯ 8ನೇ ಆವೃತ್ತಿಯ ಮೊದಲ ಹಂತದ ವೇಳಾಪಟ್ಟಿ ಬಿಡುಗಡೆಯಾಗಿದೆ. ಟೂರ್ನಿಯ ಮೊದಲ ಹಂತದ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿದೆ.

ಡಿಸೆಂಬರ್ 22ರಂದು ಟೂರ್ನಿ ಆರಂಭವಾಗಲಿದ್ದು, ಈ ಬಾರಿ ಡಬಲ್ ಹೆಡರ್ ಬದಲು ಟ್ರಿಪಲ್ ಹೆಡರ್ ಪಂದ್ಯಗಳನ್ನು ಆಯೋಜಿಸಲಾಗಿದೆ. ಎಂಟನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಅತಿಥೇಯ ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳು ಸೆಣಸಲಿದೆ.

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಶೆರೆಟಾನ್ ಗ್ರ್ಯಾಂಡ್ ಹೋಟೆಲ್‌ನ ಸಭಾಂಗಣವನ್ನೇ ಕ್ರೀಡಾಂಗಣದ ಮಾದರಿಯಲ್ಲಿ ಸಿದ್ಧಗೊಳಿಸಿ ಟೂರ್ನಿ ಆಯೋಜಿಸಲು ಸಿದ್ಧತೆ ನಡೆದಿದೆ. ಕೋವಿಡ್‌–19ರ ಆತಂಕದಿಂದಾಗಿ ಪ್ರೇಕ್ಷಕರಿಗೆ ಪ್ರವೇಶ ನೀಡದೇ ಇರಲು ನಿರ್ಧರಿಸಲಾಗಿದೆ.

ಮೂರು ಪಂದ್ಯಗಳು ಇರುವ ದಿನಗಳಲ್ಲಿ ಮೊದಲ ಹಣಾಹಣಿ ರಾತ್ರಿ 7.30ಕ್ಕೆ ಆರಂಭವಾಗಲಿದೆ. ಎರಡನೇ ಪಂದ್ಯ 8.30ಕ್ಕೆ ಮತ್ತು ಕೊನೆಯ ಪಂದ್ಯ 9.30ಕ್ಕೆ ಆರಂಭವಾಗಲಿದೆ.’ದಕ್ಷಿಣ ಡರ್ಬಿ‘ ಎರಡನೇ ಪಂದ್ಯದಲ್ಲಿ ತೆಲುಗು ಟೈಟಾನ್ಸ್ ಮತ್ತು ತಮಿಳ್ ತಲೈವಾಸ್ ಹಣಾಹಣಿ ನಡೆಯಲಿದೆ. ಯುಪಿ ಯೋಧಾ ಮತ್ತು ಹಾಲಿ ಚಾಂಪಿಯನ್ ಬೆಂಗಾಲ್ ವಾರಿಯರ್ಸ್ ಕೊನೆಯ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ.

ಎರಡನೇ ಹಂತದ ವೇಳಾಪಟ್ಟಿ ಜನವರಿ ಎರಡನೇ ವಾರದಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!