9 ನಾಡ ಬಂದೂಕು ಪತ್ತೆ : ಪಾಲಾಕ್ಷಪ್ಪ ಎಂಬಾತ ಪೊಲೀಸ್ ವಶಕ್ಕೆ

Prasthutha|

ಶಿವಮೊಗ್ಗ: ಪರವಾನಗಿ ಇಲ್ಲದೆ ಬಂದೂಕು ರಿಪೇರಿ ಮಾಡಿ ಶೇಖರಿಸುತ್ತಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದ್ದು ಬಂಧಿತನನ್ನು ಪಾಲಾಕ್ಷಪ್ಪ (47) ಎಂದು ಗುರುತಿಸಲಾಗಿದೆ.  ಆತನಿಂದ 9 ನಾಡ ಬಂದೂಕುಗಳನ್ನೂ ಪೊಲೀಸರು  ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

ಭದ್ರಾವತಿ ತಾಲೂಕು ಶಂಕರಘಟ್ಟ ಗ್ರಾಮದ ಮನೆಯಲ್ಲಿ ಪಾಲಾಕ್ಷಪ್ಪ ನಾಡ ಬಂದೂಕುಗಳ ರಿಪೇರಿ ಮಾಡುತ್ತಿದ್ದ ಎನ್ನಲಾಗಿದೆ.

ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರಿಗೆ ದೊರಕಿದ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಫಾಲಾಕ್ಷಪ್ಪನ ಮೇಲೆ ಮನೆ ಮೇಲೆ ದಾಳಿ ನಡೆಸಿದ್ದು, ದಾಳಿ ವೇಳೆ 9 ಬಂದೂಕು ಪತ್ತೆಯಾಗಿವೆ ಮತ್ತು ಆಯುಧ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Join Whatsapp