ಪಟಾಕಿ ಗೋದಾಮಿನಲ್ಲಿ ಸ್ಫೋಟ: 9 ಮಂದಿ ಸಾವು

Prasthutha|

ಚೆನ್ನೈ: ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಕಟ್ಟಡ ಕುಸಿದು 9 ಮಂದಿ ದುರ್ಮರಣಕ್ಕೀಡಾಗಿದ್ದು, 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ನಡೆದಿದೆ.

- Advertisement -


ಮೃತರನ್ನು ಪಟಾಕಿ ಗೋದಾಮಿನ ಮಾಲೀಕ ರವಿ, ಅವರ ಪತ್ನಿ ಜಯಶ್ರೀ, ಪುತ್ರಿ ರುತಿಕ್ಕ ಮತ್ತು ಮಗ ರುತೀಶ್ ಎಂದು ಗುರುತಿಸಲಾಗಿದೆ.
ಗೋದಾಮಿನ ಬಳಿ ರೆಸ್ಟೋರೆಂಟ್ ನಡೆಸುತ್ತಿದ್ದ ರಾಜೇಶ್ವರಿ, ವೆಲ್ಡಿಂಗ್ ಶಾಪ್ ಹೊಂದಿದ್ದ ಇಬ್ರಾಹಿಂ ಮತ್ತು ಇಬ್ರಾಹಿಂ, ವಾಟರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸರಸು ಮತ್ತು ಜೇಮ್ಸ್ ಕೂಡ ಪ್ರಾಣ ಕಳೆದುಕೊಂಡಿದ್ದಾರೆ.


ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಇದೀಗ ಕುಸಿದ ಕಟ್ಟಡದೊಳಗೆ ಸಿಲುಕಿರುವ ಜನರನ್ನು ರಕ್ಷಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಲ್ಲದೇ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸುತ್ತಿದ್ದಾರೆ. ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ಕೃಷ್ಣಗಿರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ.

Join Whatsapp