ಮಹಾರಾಷ್ಟ್ರದಲ್ಲಿ ಒಂದೇ ಕುಟುಂಬದ 9 ಮಂದಿ ಶವವಾಗಿ ಪತ್ತೆ: ಸಾಮೂಹಿಕ ಆತ್ಮಹತ್ಯೆಯ ಶಂಕೆ !

Prasthutha|

ಮಹಾರಾಷ್ಟ್ರ: ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಒಂದೇ ಕುಟುಂಬದ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಸಾಮೂಹಿಕವಾಗಿ ಆತ್ಮಹತ್ಯೆ ನಡೆಸಿರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಮುಂಬೈನಿಂದ 350 ಕಿ.ಮೀ. ದೂರದ ಸಾಂಗ್ಲಿ ಜಿಲ್ಲೆಯ ಮಹೈಸಾಲ್’ನಲ್ಲಿರುವ ಮನೆಯೊಂದರಲ್ಲಿ ಈ ದುಷ್ಕೃತ್ಯ ನಡೆದಿದ್ದು, ಸಾಂಗ್ಲಿ ಪೊಲೀಸ್ ವರಿಷ್ಠಾಧಿಕಾರಿ ದೀಕ್ಷಿತ್ ಗೆಡಮ್ ದೃಢೀಕರಿಸಿದ್ದಾರೆ.

ಇದು ಪರಸ್ಪರ ಒಪ್ಪಿಗೆಯಿಂದ ಮಾಡಿರುವ ಆತ್ಮಹತ್ಯೆ ಎಂಬ ಸಂಶಯವೂ ವ್ಯಕ್ತವಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.



Join Whatsapp