ದಾಂತೇವಾಡ: ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಇಂದು ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ 9 ಮಾವೋವಾದಿಗಳು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭದ್ರತಾ ಪಡೆಗಳ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಕಾಡಿನಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಗುಂಡಿನ ಚಕಮಕಿ ನಡೆಯಿತು ಎಂದು ಬಸ್ತಾರ್ ರೇಂಜ್ ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿಟಿಐಗೆ ತಿಳಿಸಿದ್ದಾರೆ.
ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್)ಗೆ ಸೇರಿದ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಅದರ ಪಶ್ಚಿಮ ಬಸ್ತಾರ್ ವಿಭಾಗದ ಘಟಕಕ್ಕೆ ಸೇರಿದ ನಕ್ಸಲರ ಉಪಸ್ಥಿತಿಯ ಕುರಿತು ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ