ಅಂಕೋಲಾ: ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ 9 ಮಂದಿ..!

Prasthutha|

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

- Advertisement -


ಇದರಲ್ಲಿ ಒಂದೇ ಕುಟುಂಬದ ಐವರು ಇದ್ದಾರೆ ಎನ್ನಲಾಗಿದೆ. ಒಂದೇ ಕುಟುಂಬದ ಲಕ್ಷ್ಮಣ ನಾಯ್ಕ, ಶಾಂತಿ ನಾಯ್ಕ, ರೋಷನ್, ಆವಂತಿಕಾ, ಜಗನ್ನಾಥ ಸೇರಿದಂತೆ 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಎನ್ ಡಿಆರ್ ಎಫ್ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಗುಡ್ಡ ಕುಸಿತದಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.



Join Whatsapp
Exit mobile version