ದೇವಸ್ಥಾನದ ಜಾಗದ ವಿಚಾರದಲ್ಲಿ ಜಗಳ: ಜೆಡಿಎಸ್ ಮುಖಂಡನಿಂದ ಇಬ್ಬರ ಕೊಲೆ

Prasthutha|

ಮದುಗಿರಿ: ದೇವಸ್ಥಾನದ ಜಾಗ ಕಬಳಿಸಲು ಯತ್ನಿಸಿದ ಜೆಡಿಎಸ್ ಮುಖಂಡನೊಬ್ದನನ್ನು ತರಾಟೆಗೆ ತೆಗೆದುಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಓರ್ವ ಮಹಿಳೆ ಸೇರಿ ಇಬ್ಬರು ಕೊಲೆಯಾಗಿದ್ದು ಮತ್ತೊರ್ವನ ಸ್ಥಿತಿ ಗಂಭೀರವಾಗಿದೆ.

- Advertisement -

ತುಮಕೂರು ಜಿಲ್ಲೆಯ ಮದುಗಿರಿ ತಾಲ್ಲೂಕಿನ ಮಿಡಿಗೇಶಿ ಗ್ರಾಮದಲ್ಲಿ ಈ ಧಾರುಣ ಘಟನೆ ನಡೆದಿದೆ. ರಾಮಾಂಜನಯ್ಯ (48) ಶಿಲ್ಪಾ (38) ಎಂಬವರು ಮೃತಪಟ್ಟಿದ್ದು, ಮಲ್ಲಿಕಾರ್ಜುನಯ್ಯ ಎಂಬಾತನ ಸ್ಥಿತಿ ಗಂಭೀರವಾಗಿದೆ ಮತ್ತು ಮದುಗಿರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಲೆ ಆರೋಪಿ , ಜೆಡಿಎಸ್ ಮುಖಂಡ ಶ್ರೀಧರ್ ಗುಪ್ತಾ ಮತ್ತು ಆತನ ಸಹಚರನನ್ನ ಪೊಲೀಸರು ಬಂದಿಸಿದ್ದಾರೆ.

ಬಂದಿತ ಕೊಲೆ ಆರೋಪಿ ಗ್ರಾಮದ ಗಣೇಶ ದೇವಸ್ಥಾನದ ಜಾಗ ಕಬಳಿಸಲು ಯತ್ನಿಸಿದ್ದನು ಎನ್ನಲಾಗುತ್ತಿದೆ. ಈತನಿಂದ ಜಾಗವನ್ನ ಉಳಿಸಿಕೊಳ್ಳಲು ಗ್ರಾಮಸ್ಥರು ಕೊರ್ಟ್ ಮೊರೆ ಹೋಗಿದ್ದು, ಗ್ರಾಮಸ್ಥರ ಪರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಮೃತ ರಾಮಾಂಜನಯ್ಯ ಹಾಗೂ ಶಿಲ್ಪಾ ಜಾಗದ ವಿಚಾರವಾಗಿ ಹೋರಾಟ ನಡೆಸಿದ್ದರು. ಅಂದಿನಿಂದಲೂ ಶ್ರೀಧರ್ ಗುಪ್ತಾ ಇವರ ವಿರುದ್ದ ದ್ವೇಷಕಾರುತ್ತಿದ್ದನು ಎನ್ನಲಾಗಿದೆ. ಗುರುವಾರ ರಾತ್ರಿ ರಸ್ತೆಯಲ್ಲಿ ಮಾತನಾಡುತ್ತಿದ್ದ ವೇಳೆ ಸಹಚರರೊಂದಿಗೆ ಬಂದು ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಚ್ಚಿ ಕೊಲೆಗೈದಿದ್ದಾನೆ.

- Advertisement -

ಘಟನೆಯಿಂದ ಗ್ರಾಮದಲ್ಲಿ ಬಿಗುವಿನ ವಾತವರಣ ಉಂಟಾಗಿದ್ದು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರವಾಡ್ ಭೇಟಿ ನೀಡಿ ಗ್ರಾಮದಲ್ಲಿ ಶಾಂತಿ ಮೂಡಿಸುವ ಪ್ರಯತ್ನ ಮಾಡಿದ್ದಾರೆ. ಮಿಡಿಗೇಶಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Join Whatsapp